wrappixel kit

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ

ಕರ್ನಾಟಕ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿತಂದಾಸ) ವನ್ನು 2008 ರಲ್ಲಿ ಖ್ಯಾತ ವಿಜ್ಞಾನಿ ಭಾರತರತ್ನ ಪ್ರೊ. ಸಿ. ಎನ್. ಆರ್. ರಾವ್, ಎಫ್.ಆರ್.ಎಸ್., ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕರು ಹಾಗೂ ಗೌರವಾನ್ವಿತ ಅಧ್ಯಕ್ಷರು, ಜೆ.ಎನ್.ಸಿ.ಎಸ್.ಎ.ಆರ್., ರವರ ಅಧ್ಯಕ್ಷತೆಯಲ್ಲಿ ರಚಿಸಿರುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ದಾರ್ಶನಿಕ ಸಮೂಹದ ಯೋಜನೆಗಳ ಸಂಯೋಜನೆ ಹಾಗೂ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ಸರ್ವೋನ್ನತ ಮಂಡಳಿಯಾಗಿ ಕಾರ್ಯನಿರ್ವಹಿಸುತ್ತಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದ (ವಿತಂದಾಸ) ಪ್ರಮುಖ ಉದ್ದೇಶವೆಂದರೆ ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುವುದು ಮತ್ತು ಉತ್ತೇಜಿಸುವುದಾಗಿದೆ. ವೈಜ್ಞಾನಿಕ ಮತ್ತು ತಾಂತ್ರಿಕ ಅಗತ್ಯಗಳನ್ನು ಪೂರೈಸಲು ಶೈಕ್ಷಣಿಕ ಸಂಸ್ಥೆಗಳನ್ನು ಬಲಪಡಿಸುವಲ್ಲಿ ಹಾಗೂ ವೇಗವರ್ಧಿಸುವಲ್ಲಿ ವಿತಂದಾಸ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಸಾಧಿಸಲು ವಿತಂದಾಸವು ವ್ಯಾಪಕ ಉಪಕ್ರಮಗಳು ಮತ್ತು ಕಾರ್ಯಗಳ ಮುಖಾಂತರ ಮೂಲ ವಿಜ್ಞಾನ ಶಿಕ್ಷಣ, ಸಂಶೋಧನೆ (ಇಂಜಿನಿಯರಿಂಗ್ ಸೇರಿದಂತೆ) ಹಾಗೂ ವಿಜ್ಞಾನವನ್ನು ಜನಸಾಮಾನ್ಯರಲ್ಲಿಗೆ ಕೊಂಡೊಯ್ಯುವಲ್ಲಿ ಮಾದರಿ ಬದಲಾವಣೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯಗಳು, ಸರ್ಕಾರೇತರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ತೊಡಗಿಸಿಕೊಂಡಿದೆ. 

ವಿತಂದಾಸ ಕಾರ್ಯಗಳು:

ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಗೆ ಸಂಬಂಧಿಸಿದ ಈ ಕೆಳಕಂಡ ಕಾರ್ಯಕ್ರಮಗಳ ರಚನೆ

  • ರಾಜ್ಯ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಾರ ಮಾಡ್ಯೂಲ್‌ಗಳು/ಉಪಕರಣಗಳನ್ನು ಅಭಿವೃದ್ಧಿಪಡಿಸುವುದು
  • ಉತ್ತಮ ಗುಣಮಟ್ಟದ ಬೋಧನೆ ಮತ್ತು ಸಂಶೋಧನೆ ನಡೆಸಲು ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವುದು
  • ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಾರ
  • ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಕಾರ್ಯಕ್ರಮಗಳನ್ನು ಬೆಂಬಲಿಸುವುದು
  • ಸಂಶೋಧನಾ ಪ್ರಕಟಣೆಗಳನ್ನು ಗುರುತಿಸುವುದು ಮತ್ತು ಬಹುಮಾನ ನೀಡುವುದು
  • ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವುದು
  • ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಾರ ಅಭಿಯಾನ
  • ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳು

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS